Homeಉಡುಪಿಪ್ರಮುಖ ಸುದ್ದಿರಾಜ್ಯಶಿವಮೊಗ್ಗ

ಸ್ವರಧಾರೆ ನಿಲ್ಲಿಸಿದ ಧಾರೇಶ್ವರ | ಹೊಸ ಪ್ರಯೋಗಗಳ ರಂಗಮಾಂತ್ರಿಕ ಸುಬ್ರಹ್ಮಣ್ಯ ಧಾರೇಶ್ವರ ನಿಧನ

ಸ್ವರಧಾರೆ ನಿಲ್ಲಿಸಿದ ಧಾರೇಶ್ವರ |
ಹೊಸ ಪ್ರಯೋಗಗಳ ರಂಗಮಾಂತ್ರಿಕ ಸುಬ್ರಹ್ಮಣ್ಯ ಧಾರೇಶ್ವರ ನಿಧನ

ಶಿವಮೊಗ್ಗ: ಬಡಗುತಿಟ್ಟಿನ ಯಕ್ಷಗಾನದಲ್ಲಿ ಹೊಸ ಅಲೆ ಎಬ್ಬಿಸಿದ್ದ ಕಾಳಿಂಗ ನಾವಡರ ಅಗಲುವಿಕೆಯ ಬಳಿಕ‌ ಉಂಟಾಗಬಹುದಿದ್ದ ನಿರ್ವಾತವನ್ನು ತುಂಬಲು ಯತ್ನಿಸಿದ್ದ ಭಾಗವತ ಶ್ರೇಷ್ಠ ಸುಬ್ರಹ್ಮಣ್ಯ ಧಾರೇಶ್ವರ (67) ಅವರು ಏ.25 ರಂದು ಬೆಳಗ್ಗೆ 4.30 ಕ್ಕೆ ಬೆಂಗಳೂರಿನಲ್ಲಿ ಪುತ್ರನ ಮನೆಯಲ್ಲಿ ಅಲ್ಪ ಕಾಲದ ಅಸೌಖ್ಯದಿಂದ ನಮ್ಮನ್ನು ಅಗಲಿದ್ದಾರೆ.

ಯಕ್ಷಗಾನ ರಂಗ ಕಂಡ ಪ್ರಯೋಗಶೀಲ ಭಾಗವತರಾಗಿದ್ದ ಅವರು ಪತ್ನಿ,ಪುತ್ರ,ಪುತ್ರಿಯನ್ನು ಅಗಲಿದ್ದಾರೆ.

ಪೆರ್ಡೂರು ಮೇಳವೊಂದರಲ್ಲೇ 28 ವರ್ಷ ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸಿದ್ದ ಅವರು ಅದಕ್ಕೂ ಮೊದಲು ಅಮೃತೇಶ್ವರಿ ಮೇಳದಲ್ಲಿ ತಮ್ಮ ತಿರುಗಾಟ ಆರಂಭಿಸಿದ್ದರು.

ಹಿರೇಮಹಾಲಿಂಗೇಶ್ವರ ಮೇಳ ಹಾಗೂ ಶಿರಸಿ ಮೇಳದಲ್ಲೂ ಭಾಗವತರಾಗಿ ಬಳಿಕ ಪೆರ್ಡೂರು ಮೇಳದ ರಂಗ ಮಂಚವೇರಿದವರು ಯಶಸ್ಸಿನ ಶಿಖರ ತಲುಪಿದ್ದರು.

1957 ರಲ್ಲಿ ಗೋಕರ್ಣದಲ್ಲಿ ಜನಿಸಿದ್ದ ಅವರು ಸಂಗೀತಾಭ್ಯಾಸ ‌ಮಾಡಿ ಕಾರ್ಯಕ್ರಮ ನೀಡುತ್ತಿದ್ದರು. ಬಳಿಕ ಎಲೆಕ್ಟ್ರಿಕ್ ಅಂಗಡಿ ಹಾಕಿ ಯಕ್ಷಗಾನ ಮೇಳಕ್ಕೆ ಲೈಟಿಂಗ್ ವ್ಯವಸ್ಥೆ ಗೆ ಸೇರಿದ್ದರು. ಪ್ರಾಚಾರ್ಯ ನಾರಣಪ್ಪ ಉಪ್ಪೂರರ ಮೂಲಕ ರಂಗಸ್ಥಳದ ಮೇಲೇರಿದರು.

ಹೊಸ ಹೊಸ ಪ್ರಸಂಗಗಳನ್ನು ಹೊಸತನದಲ್ಲಿ ನಿರ್ದೇಶಿಸುವ ಮೂಲಕ ರಂಗಮಾಂತ್ರಿಕ ಎನಿಸಿದ್ದರು. ಕೀರ್ತಿಯ ಉತ್ತುಂಗದಲ್ಲಿ ಇದ್ದಾಗಲೇ ಮೇಳ ತಿರುಗಾಟ ನಿಲ್ಲಿಸಿದ್ದರು. ಮೇಳ ಬಿಟ್ಟು 10 ವರ್ಷದ ಬಳಿಕ ಮತ್ತೆ ಅದೇ ಮೇಳಕ್ಕೆ ಅನಿವಾರ್ಯ ಸಂದರ್ಭದಲ್ಲಿ ಸೇರಿ ಒಂದು ವರ್ಷದ ತಿರುಗಾಟ ಮಾಡಿದ್ದರು. ಧಾರೇಶ್ವರ ಯಕ್ಷ ಬಳಗ ಮೂಲಕ ಯಕ್ಷಗಾನ ಕಾರ್ಯಕ್ರಮ ಸಂಯೋಜಿಸುತ್ತಿದ್ದರು. ಬದುಕಿನುದ್ದಕ್ಕೂ ತಮ್ಮ ಸ್ವರದ ಮೂಲಕವೇ ಅಭಿಮಾನಿಗಳನ್ನು ಸೆಳೆದಿಟ್ಟುಕೊಂಡಿದ್ದ ಭಾಗವತರ ಅಗಲುವಿಕೆ ನಿಜಕ್ಕೂ ಮಾತಾಡದ ಸ್ಥಿತಿ ತಂದಿದೆ.

* ಲಕ್ಷ್ಮೀ ಮಚ್ಚಿನ

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

1 of 45

Leave A Reply

Your email address will not be published. Required fields are marked *