Homeಪ್ರಮುಖ ಸುದ್ದಿಶಿವಮೊಗ್ಗಶಿವಮೊಗ್ಗ ಜಿಲ್ಲೆ

BYR: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ : ಸಂಸದ ಬಿ.ವೈ.ರಾಘವೇಂದ್ರ

ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ | ಸಂಸದ ಬಿ.ವೈ.ರಾಘವೇಂದ್ರ

ಶಿವಮೊಗ್ಗ :- ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆಯಿದ್ದು, ಇದರ ಪರಿಣಾಮವಾಗಿ ಬಿಜೆಪಿ -ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳು ಜಯಭೇರಿ ಬಾರಿಸಲಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಬಿಜೆಪಿ ನಗರ ಮಂಡಲ ವತಿಯಿಂದ ನಗರದ ಸೋಮಿನಕೊಪ್ಪ ರಸ್ತೆಯಲ್ಲಿರುವ ಶಾರದಮ್ಮ ಬಡಾವಣೆಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾಂಗ್ರೆಸ್ ಗ್ಯಾರೆಂಟಿಗಳು ರಾಜ್ಯದ ಎಲ್ಲಾ ಜನರಿಗೆ ತಲುಪುವಲ್ಲಿ ವಿಫಲವಾಗಿದೆ. ಇದು ಮೂಗಿಗೆ ತುಪ್ಪ ಸವರುವಂತಹ ಕೆಲಸವಾಗಿದೆ. ರಾಜ್ಯದ ಪ್ರಜವಂತ ಮತದಾರರು ಇದನ್ನು ಗಮನಿಸುತ್ತಿದ್ದಾರೆ. ಬಿಜೆಪಿಗೆ ಹೆಚ್ಚಿನ ಬೆಂಬಲವನ್ನು ನೀಡಲಿದ್ದಾರೆ ಎಂದು ಹೇಳಿದರು.
ಈ ಚುನಾವಣೆ ರಾಷ್ಟ್ರೀಯ ಹಿತವನ್ನು ದೃಷ್ಟಿಯಲ್ಲಿಟ್ಟುಕೊಂಡು ನಡೆಯುತ್ತಿರುವ ಚುನಾವಣೆಯಾಗಿದೆ. ಯಾವುದೇ ಕುಟುಂಬದ ವಿಷಯ, ವ್ಯಕ್ತಿಗಳ ವಿಷಯ, ಹಾಗೂ ಟೀಕೆ ಟಿಪ್ಪಣಿಗಳಿಗೆ ಮತದಾರರು ತಲೆ ಕೆಡಿಸಿಕೊಳ್ಳುವುದಿಲ್ಲ, ರಾಷ್ಟ್ರದ ರಕ್ಷಣೆ ಹಾಗೂ ಪ್ರತಿಯೊಬ್ಬ ಪ್ರಜೆಯ ರಕ್ಷಣೆಯನ್ನು ಮಾಡುವಂತಹ ಸರ್ಕಾರವನ್ನು ಆಯ್ಕೆ ಮಾಡಬೇಕೆಂಬುದು ಪ್ರತಿಯೊಬ್ಬ ಭಾರತೀಯನ ಆಶಯವಾಗಿದೆ. ಈ ಹಿನ್ನೆಲೆಯಲ್ಲಿ ಮೋದಿ ನೇತೃತ್ವದ ಸರ್ಕಾರ ಮತ್ತೊಮ್ಮೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದೆ ಇದಕ್ಕೆ ಯಾವುದೇ ಸಂಶಯವಿಲ್ಲ ಎಂದರು.

ಶಾಸಕ ಎಸ್.ಎನ್.ಚನ್ನಬಸಪ್ಪ, ಮಾಜಿ ಕಾರ್ಪೋರೇಟರ್ ಆಶಾ ಚಂದ್ರಪ್ಪ, ಬೊಮ್ಮನಕಟ್ಟೆ ಮಾಲತೇಶ್, ಇನ್ನಿತರರ ಸಹಕಾರದಿಂದಾಗಿ ಬೊಮ್ಮನಕಟ್ಟೆ ಭಾಗದಲ್ಲಿ ಪ್ರತಿ ಮನೆ ಮನೆಗೆ ಭೇಟಿ ನೀಡಿ ಮತಯಾಚಿಸುವಂತಹ ಕೆಲಸ ಯಶಸ್ವಿಯಾಗಿದೆ ಎಂದರು ಹೇಳಿದರು.

ಈ ಸಂದರ್ಭದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ, ಮೋಹನ್ ರೆಡ್ಡಿ, ನಾಗರಾಜ್, ಸೋಮಶೇಖರ್ ಇತರರು ಇದ್ದರು.

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

1 of 45

Leave A Reply

Your email address will not be published. Required fields are marked *