Homeಉಡುಪಿಕ್ರೈಂತಾಲ್ಲೂಕುತೀರ್ಥಹಳ್ಳಿಪ್ರಮುಖ ಸುದ್ದಿ

ಶಿವಮೊಗ್ಗ ಜಿಲ್ಲಾ ನೂತನ ರಕ್ಷಣಾಧಿಕಾರಿಯಾಗಿ ನಿಖಿಲ್ IPS

ಶಿವಮೊಗ್ಗ ಜಿಲ್ಲಾ ನೂತನ ರಕ್ಷಣಾಧಿಕಾರಿಯಾಗಿ ನಿಖಿಲ್ IPS

ಶಿವಮೊಗ್ಗ: ಜಿಲ್ಲೆಯ ನೂತನ ರಕ್ಷಣಾಧಿಕಾರಿಯಾಗಿ ನಿಖಿಲ್‌.ಬಿ (Nikhil IPS) ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ. ಸದ್ಯ ಕೋಲಾರ ಜಿಲ್ಲೆಯ ರಕ್ಷಣಾಧಿಕಾರಿಯಾಗಿರುವ ನಿಖಿಲ್‌ ಅವರು ನೂತನ ವರ್ಷದ ಮೊದಲ ದಿನದಿಂದಲೇ ಶಿವಮೊಗ್ಗದಲ್ಲಿ ಜವಾಬ್ದಾರಿ ವಹಿಸಿಕೊಳ್ಳುವ ಸಾಧ್ಯತೆ ಇದೆ.
ಐಪಿಎಸ್‌ ಅಧಿಕಾರಿ ನಿಖಿಲ್‌.ಬಿ ಅವರು ಮೂಲತಃ ಚಿತ್ರದುರ್ಗ ಜಿಲ್ಲೆಯವರು. ಬೆಳೆದಿದ್ದೆಲ್ಲ ಬೆಂಗಳೂರಿನಲ್ಲಿ. ಮೆಕಾನಿಕಲ್‌ ಇಂಜಿನಿಯರಿಂಗ್‌ ಪದವಿ ಹೊಂದಿದ್ದಾರೆ.

2017ರ ಬ್ಯಾಚ್‌ನ ಐಪಿಎಸ್‌ ಅಧಿಕಾರಿ. ರಾಯಚೂರಿನಲ್ಲಿ ಪ್ರೊಬೇಷನರಿ ಅವಧಿ ಪೂರ್ಣಗೊಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಎಎಸ್‌ಪಿಯಾಗಿ ಸೇವೆ ಸಲ್ಲಿಸಿದ್ದರು. ನಕ್ಸಲ್‌ ನಿಗ್ರಹ ಪಡೆ (ಎಎನ್‌ಎಫ್‌) ಮತ್ತು ಕರಾವಳಿ ಭದ್ರಾತಾ ಪಡೆಯಲ್ಲಿ ಜವಾಬ್ದಾರಿ ನಿಭಾಯಿಸಿದ್ದರು.

ಎರಡು ವರ್ಷ ಎಂಟು ತಿಂಗಳು ರಾಯೂಚೂರು ಜಿಲ್ಲಾ ರಕ್ಷಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಒಂದೂವರೆ ವರ್ಷದಿಂದ ಕೋಲಾರ ಜಿಲ್ಲಾ ರಕ್ಷಣಾಧಿಕಾರಿಯಾಗಿ ಜವಾಬ್ದಾರಿ ನಿಭಾಯಿಸುತ್ತಿದ್ದರು.

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

ಬೆಂಗಳೂರು ಸಿನಿ ಉತ್ಸವದಲ್ಲಿ ಮಲೆನಾಡಿನ ಕಲರವ | ಗಾರ್ಗಿ ಕಾರೇಹಕ್ಲು ನಿರ್ದೇಶನದ ಹಕ್ಕಿಗಾಗಿ ಸಿನಿಮಾಕ್ಕೆ ಜೂರಿ ಅವಾರ್ಡ್|

ಬೆಂಗಳೂರು ಸಿನಿ ಉತ್ಸವದಲ್ಲಿ ಮಲೆನಾಡಿನ ಕಲರವ | ಗಾರ್ಗಿ ಕಾರೇಹಕ್ಲು ನಿರ್ದೇಶನದ ಹಕ್ಕಿಗಾಗಿ…

1 of 51

Leave A Reply

Your email address will not be published. Required fields are marked *