
ಹೊಸನಗರ.ಜು.26 : ಹೊಸನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತಿನ ಹೊಸನಗರ ತಾಲೂಕು ಸಮಿತಿಯ ವತಿಯಿಂದ ಇಂದು ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಜಾನಪದ ಗೀತೆ ಸ್ಪರ್ಧೆ ನಡೆಯಿತು.
ತಾಲೂಕಿನ ಎಲ್ಲಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ನಂತರ ಕರ್ನಾಟಕ ಜಾನಪದ ಪರಿಷತ್ತಿನ ಹೊಸನಗರ ತಾಲೂಕು ಅಧ್ಯಕ್ಷ ಎಂ ಎಂ ಪರಮೇಶ್ ಇವರ ಅಧ್ಯಕ್ಷತೆಯಲ್ಲಿ ಬಹುಮಾನ ವಿತರಣ ಕಾರ್ಯಕ್ರಮ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವುದರ ಮುಖಾಂತರ ಡಾ. ಅಂಬೇಡ್ಕರ್ ನಿಗಮದ ನಿರ್ದೇಶಕ ಎನ್ ಆರ್ ದೇವಾನಂದ್ ಉದ್ಘಾಟಿಸಿದರು.


ಈ ಸಮಾರಂಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ತ.ಮ.ನರಸಿಂಹ, ಪಟ್ಟಣ ಪಂಚಾಯಿತಿ ಸದಸ್ಯ ಹಾಲಗದ್ದೆ ಉಮೇಶ್, ಕಳೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಿನಯ ಗೌಡ ಮತ್ತು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರಾದ ಶ್ರೀಮತಿ ಸಾಕಮ್ಮ, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಹೆಚ್ಆರ್ ಪ್ರಕಾಶ್ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿದರು.
ನಂತರ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸಭೆಯಲ್ಲಿ ಗಾಯಕ ಸುರೇಶ್ ಕುಮಾರ್, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ವೆಂಕಟೇಶಮೂರ್ತಿ ಸಭೆಯಲ್ಲಿ ಉಪಸ್ಥಿತರಿದ್ದರು. ಸತೀಶ್ ಸ್ವಾಗತಿಸಿದರು. ಸುಧಾಕರ್ ಕಾರ್ಯಕ್ರಮ ನಿರೂಪಿಸಿ, ವಂದಸಿದರು.
ಹೊಸನಗರ ಜಾನಪದ ಪರಿಷತ್ತಿನ ಕಾರ್ಯದರ್ಶಿ ವಿಜೇಂದ್ರ ಶೇಟ್ ರವರ ನೇತೃತ್ವದಲ್ಲಿ ಅತ್ಯಂತ ಯಶಸ್ವಿಯಾಗಿ ಕಾರ್ಯಕ್ರಮ ನಡೆಯಿತು.
