-
ಅಮ್ಮನಘಟ್ಟಕ್ಕೆ ತಹಶೀಲ್ದಾರ್ ರಶ್ಮಿ ಹಾಲೇಶ್ ಭೇಟಿ : ಅನುದಾನ ಬಿಡುಗಡೆ ಮಾಡುವ ಭರವಸೆ : ಪ್ರತಿಭಟನೆ ಕೈಬಿಟ್ಟ ಮಾಜಿ ಶಾಸಕ ಬಿ.ಸ್ವಾಮಿರಾವ್
ಹೊಸನಗರ: ಅಮ್ಮನಘಟ್ಟಕ್ಕೆ ತಹಶೀಲ್ದಾರ್ ರಶ್ಮಿಹಾಲೇಶ್ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಿ ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ್ದಾರೆ.
ಅಮ್ಮನಘಟ್ಟಕ್ಕೆ ಅನುದಾನ ಬಿಡುಗಡೆ ಮಾಡುವ ಬಗ್ಗೆ ತಹಶೀಲ್ದಾರ್ ಮೀನಾಮೇಷ ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಬಿ.ಸ್ವಾಮಿರಾವ್ ತಾಲೂಕು ಕಚೇರಿ ಗುರುವಾರ ಪ್ರತಿಭಟನೆ ನಡೆಸಲು ಮುಂದಾಗಿದ್ದರು.
ಮಾಜಿ ಶಾಸಕರನ್ನು ತಮ್ಮ ಕಚೇರಿಗೆ ಬರಮಾಡಿಕೊಂಡ ತಹಶೀಲ್ದಾರ್ ರಶ್ಮಿ ಮಾತುಕತೆ ನಡೆಸಿದ ಬಳಿಕ ಅಮ್ಮನಘಟ್ಟಕ್ಕೆ ತೆರಳಿ ಅಲ್ಲಿಯ ಕಾಮಗಾರಿ ವೀಕ್ಷಿಸಿದರು. ಬಳಿಕ ಅನುದಾನ ಬಿಡುಗಡೆ ಮಾಡುವ ಬಗ್ಗೆ ಭರವಸೆ ನೀಡಿದ ಹಿನ್ನೆಲೆಯಲ್ಲಿ ಸ್ವಾಮಿರಾವ್ ಪ್ರತಿಭಟನೆ ಕೈಬಿಟ್ಟರು.
ತಾಲೂಕಿನ ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನದ ಜೀರ್ಣೋದ್ಧಾರ ಕ್ಕಾಗಿ ಸರ್ಕಾರ ಮಂಜೂರು ಮಾಡಿರುವ ರೂ.1 ಕೋಟಿ ಹಣವನ್ನು ಬಿಡುಗಡೆ ಮಾಡುತ್ತಿಲ್ಲ ಎಂಬುದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಆಗಿರುವ ಸ್ವಾಮಿರಾವ್ ಆರೋಪವಾಗಿತ್ತು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ.ಮೇಘರಾಜ್, ತಾಲೂಕು ಬಿಜೆಪಿ ಅಧ್ಯಕ್ಷ ಗಣಪತಿ ಬೆಳಗೋಡು, ತಾಪಂ ಮಾಜಿ ಅಧ್ಯಕ್ಷ ಆಲವಳ್ಳಿ ವೀರೇಶ್, ತಾಲೂಕು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ನಿತಿನ್ ನಗರ, ಪ್ರಮುಖರಾದ ಹೆಚ್.ಬಿ.ಕಲ್ಯಾಣಪ್ಪ ಗೌಡ, ಮಂಡಾನಿ ಮೋಹನ ಇತರರು ಪಾಲ್ಗೊಂಡಿದ್ದರು.