Homeಉಡುಪಿಕ್ರೈಂತಾಲ್ಲೂಕುತೀರ್ಥಹಳ್ಳಿಪ್ರಮುಖ ಸುದ್ದಿ

BUS ACCIDENT | ಹುಲಿಕಲ್ ಘಾಟ್ ಧರೆಗೆ ಗುದ್ದಿದ ಬಸ್ | ಮಗು ಸಾವು.. ಹಲವರು ಗಂಭೀರ

BUS ACCIDENT | ಹುಲಿಕಲ್ ಘಾಟ್ ಧರೆಗೆ ಗುದ್ದಿದ ಬಸ್ | ಮಗು ಸಾವು.. ಹಲವರು ಗಂಭೀರ

ಹೊಸನಗರ: ದಾವಣಗೆರೆಯಿಂದ ಮಂಗಳೂರು‌ ಕಡೆ ಹೋಗುತ್ತಿದ್ದ ಖಾಸಗಿ ದುರ್ಗಾಂಬ‌ ಬಸ್ಸು ಹುಲಿಕಲ್ ಘಾಟ್ ರಸ್ತೆಯ ಬದಿ ಧರೆಗೆ ಗುದ್ದಿದ ಪರಿಣಾಮ ಮಗುವೊಂದು ಸಾವು ಕಂಡಿದ್ದು, ಹಲವರು ಗಾಯಗೊಂಡ ಘಟನೆ ಸೋಮವಾರ ತಡರಾತ್ರಿ ನಡೆದ ಬಗ್ಗೆ ವರದಿಯಾಗಿದೆ.

ನಿದ್ದೆಯ ಮಂಪರು, ಚಾಲಕನ ನಿಯಂತ್ರಣ ತಪ್ಪಿ ದುರ್ಘಟನೆ ನಡೆದಿದೆ. ಗಂಭೀರ ಗಾಯಗೊಂಡವರಲ್ಲಿ ಶರೀಫಾಬಿ (57), ಇಮಾಮ್ ಸಾಬ್ (73), ಸಫಾನ (28) ಎಂಬುವರನ್ನು ಕೂಡಲೇ ಉಡುಪಿ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿದೆ.

ಖಾಸಗಿ ಬಸ್ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಘಟನೆಯ ಸಂಪೂರ್ಣ ವಿವರ ಇನ್ನಷ್ಟೇ ಲಭ್ಯವಾಗಬೇಕಿದೆ.

ಘಟನೆ ನಡೆಯುತ್ತಿದ್ದಂತೆ ನಗರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಪ್ರಾಥಮಿಕ ಮಾಹಿತಿ ಸಂಗ್ರಹಿಸಿದ್ದಾರೆ. ಮಂಗಳವಾರ ಮುಂಜಾನೆ ಪೊಲೀಸ್ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಘಟನೆಯ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ.

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

ಬೆಂಗಳೂರು ಸಿನಿ ಉತ್ಸವದಲ್ಲಿ ಮಲೆನಾಡಿನ ಕಲರವ | ಗಾರ್ಗಿ ಕಾರೇಹಕ್ಲು ನಿರ್ದೇಶನದ ಹಕ್ಕಿಗಾಗಿ ಸಿನಿಮಾಕ್ಕೆ ಜೂರಿ ಅವಾರ್ಡ್|

ಬೆಂಗಳೂರು ಸಿನಿ ಉತ್ಸವದಲ್ಲಿ ಮಲೆನಾಡಿನ ಕಲರವ | ಗಾರ್ಗಿ ಕಾರೇಹಕ್ಲು ನಿರ್ದೇಶನದ ಹಕ್ಕಿಗಾಗಿ…

1 of 51

Leave A Reply

Your email address will not be published. Required fields are marked *