
ಶಿವಮೊಗ್ಗ ಜು.25: ಜಿಲ್ಲೆಯ ಕೆಲವು ದೇವಾಲಯಗಳ ಹಾಗೂ ಪ್ರಾಚೀನ ಸ್ಮಾರಕಗಳ ಅಭಿವೃದ್ಧಿಯನ್ನು ಕೈಗೊಳ್ಳುವ ಬಗ್ಗೆ ಕೇಂದ್ರ ಪ್ರಾಚ್ಯವಸ್ತು ಇಲಾಖೆಯ ಅನುಮತಿ ಹಾಗೂ ಇಲಾಖೆಯಿಂದ ಅಭಿವೃದ್ಧಿಪಡಿಸುವಂತೆ ಕೋರಿ ಮಾನ್ಯ ಸಂಸದರಾದ ಬಿ.ವೈ. ರಾಘವೇಂದ್ರ ರವರು ಇಂದು ಸನ್ಮಾನ್ಯ ಶ್ರೀ ಕಿಶನ್ ರೆಡ್ಡಿ ಮಾನ್ಯ ಸಂಸ್ಕ್ರತಿ ಹಾಗೂ ಪ್ರವಾಸೋಧ್ಯಮ ಸಚಿವರು ಕೇಂದ್ರ ಸರ್ಕಾರ ಇವರನ್ನು ಇಂದು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿರುವುದಾಗಿ ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.


ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯದ ಗೃಹ ಸಚಿವರಾದ ಅರಗ ಜ್ಞಾನೇಂದ್ರ, ಸಾಗರ ಶಾಸಕರಾದ ಹರತಾಳು ಹಾಲಪ್ಪ ಹಾಗೂ ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಜೀವರಾಜ್ ಉಪಸ್ಥಿತರಿದ್ದರು.
