Homeಉಡುಪಿಶಿವಮೊಗ್ಗ

ಸಿಇಟಿ ಪಲಿತಾಂಶ| ಪ್ರಥಮ ವರ್ಷದಲ್ಲೇ ಉತ್ತಮ ಸಾಧನೆ ಮಾಡಿದ ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜ್

ಉಡುಪಿ.ಜು.30: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜೂನ್ -2022 ರಲ್ಲಿ ನಡೆಸಿದ ವಿವಿಧ ವೃತ್ತಿಪರ ಕೋರ್ಸ್‌ ಗಳಿಗೆ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ ಪಿ ಯು ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಿ ರಾಜ್ಯದ ವಿವಿಧ ಪ್ರತಿಷ್ಠಿತ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಅರ್ಹತೆಗಳಿಸಿದ್ದಾರೆ.

ರಾಜ್ಯದ ಕೃಷಿ ವಿಶ್ವ ವಿದ್ಯಾನಿಲಯಗಳಿಗೆ ನಡೆಸುವ ಪ್ರಾಯೋಗಿಕ ಪರೀಕ್ಷೆಯಲ್ಲಿ ಉಪಾಸನ ಬಿ ಪಿ ರಾಜ್ಯಕ್ಕೆ 42 ನೇ ರ‍್ಯಾಂಕ್‌ ಹಾಗೂ ಪಶುವೈದ್ಯಕೀಯ ಪ್ರಾಯೋಗಿಕ ಪರೀಕ್ಷೆಯಲ್ಲಿ 103 ನೇ ರ‍್ಯಾಂಕ್‌ ಗಳಿಸಿದ್ದಾರೆ.

ಮಧುಶ್ರೀ ವಿ ಕೃಷಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 72 ನೇ ರ‍್ಯಾಂಕ್‌, ಪಶುವೃದ್ಯಕೀಯ ಪ್ರಾಯೋಗಿಕದಲ್ಲಿ 126 ನೇ ರ‍್ಯಾಂಕ್‌ ಗಳಿಸಿದ್ದಾರೆ.

ಕಾಲೇಜಿನ ರಾಘವೇಂದ್ರ ತಾಳಿಕೋಟಿ ಪಶುವೈದ್ಯಕೀಯದಲ್ಲಿ ರಾಜ್ಯಕ್ಕೆ 110 ನೇ ರ‍್ಯಾಂಕ್‌, ಬಿ-ಫಾರ್ಮಾ ದಲ್ಲಿ 150 ನೇ ರ‍್ಯಾಂಕ್‌ , ಬಿ.ಎನ್‌.ವೈ.ಎಸ್‌ ವಿಭಾಗದಲ್ಲಿ 165 ನೇ ರ‍್ಯಾಂಕ್‌, ಕೃಷಿ ವಿಜ್ಞಾನದಲ್ಲಿ 186 ನೇ ರ‍್ಯಾಂಕ್‌ ಹಾಗೂ ಇಂಜಿನಿಯರಿಂಗ್ ನಲ್ಲಿ 636 ನೇ ರ‍್ಯಾಂಕ್‌ ಪಡೆದಿದ್ದಾರೆ.

ಸಾತ್ವಿಕ್‌ ಶ್ರೀಕಾಂತ ಹೆಗಡೆ ಬಿ.ಎನ್‌.ವೈ.ಎಸ್‌ ನಲ್ಲಿ 116 ರ‍್ಯಾಂಕ್‌, ಪಶುವೈದ್ಯಕೀಯದಲ್ಲಿ 222 ನೇ ರ‍್ಯಾಂಕ್‌, ಬಿ.ಫಾರ್ಮಾ ದಲ್ಲಿ 383 ನೇ ರ‍್ಯಾಂಕ್‌ ಪಡೆದಿದ್ದಾರೆ.

ಕುಮಾರಿ ಸಿಂಚನ ಕೆ ಎಸ್‌, ಬಿ.ಎನ್‌.ವೈ.ಎಸ್‌ ವಿಭಾಗದಲ್ಲಿ 745 ನೇ ರ‍್ಯಾಂಕ್‌, ಕೃಷಿ ವಿಜ್ಞಾನದಲ್ಲಿ 835 ನೇ ರ‍್ಯಾಂಕ್‌ ಪಡೆದಿದ್ದಾರೆ.

ಅಗಸ್ತ್ಯ ಸಮ್ಯಕ್‌ ಜ್ಞಾನ್‌ ಕೃಷಿ ವಿಜ್ಞಾನದಲ್ಲಿ 679 ನೇ ರ‍್ಯಾಂಕ್‌, ಬಿ.ಎನ್‌.ವೈ.ಎಸ್‌ ವಿಭಾಗದಲ್ಲಿ 924 ನೇ ರ‍್ಯಾಂಕ್‌ ಹಾಗೂ ಅನ್ವಿನ್ ಬಿ ಪಿ ಇಂಜಿನಿಯರಿಂಗ್‌ ವಿಭಾಗದಲ್ಲಿ 681 ನೇ ರ‍್ಯಾಂಕ್‌ ಪಡೆದಿದ್ದಾರೆ.

ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಕ್ರಿಯೇಟಿವ್‌ ನ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ರಾಜ್ಯ ಮಟ್ಟದ 1 ರಿಂದ 1000 ರ‍್ಯಾಂಕ್‌ ನ ಒಳಗೆ 31 ವಿದ್ಯಾರ್ಥಿಗಳು, 2000 ದ ಒಳಗೆ 66 ವಿದ್ಯಾರ್ಥಿಗಳು ರ‍್ಯಾಂಕ್‌ ನ್ನು ಗಳಿಸಿದ್ದಾರೆ.

ತನ್ನ ಪ್ರಥಮ ವರ್ಷದ ಸಿ.ಇ.ಟಿ ಫಲಿತಾಂಶದಲ್ಲಿಯೇ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜು ಈ ಅಮೋಘ ಸಾಧನೆ ದಾಖಲಿಸಿದೆ. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲೂ 100 ಶೇಕಡಾ ಫಲಿತಾಂಶ ದಾಖಲಿಸಿತ್ತು.

ವಿದ್ಯಾರ್ಥಿಗಳ ಈ ಸಾಧನೆಗೆ ಸಿ.ಇ.ಟಿ ಸಂಯೋಜಕರಾದ  ಸುಜಯ್‌ ಬಿ ಟಿ, ಕಾಲೇಜಿನ ಆಡಳಿತ ಮಂಡಳಿ ಹಾಗೂ ಉಪನ್ಯಾಸಕ ವೃಂದ ಅಭಿನಂದನೆ ಸಲ್ಲಿಸಿ, ಸಂತಸ ವ್ಯಕ್ತಪಡಿಸಿದ್ದಾರೆ.

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

1 of 45

Leave A Reply

Your email address will not be published. Required fields are marked *