ಜಲತಜ್ಞ ಚಕ್ರವಾಕ ಸುಬ್ರಹ್ಮಣ್ಯ ಗೆ 2024 ನೇ ಸಾಲಿನ ಜೀವ ವೈವಿಧ್ಯ ಪ್ರಶಸ್ತಿ

ಹೊಸನಗರ: ಜಲ ತಜ್ಞ ಚಕ್ರವಾಕ ಸುಬ್ರಹ್ಮಣ್ಯ ಕರ್ನಾಟಕ ಜೀವ ವೈವಿಧ್ಯ ಮಂಡಳಿ ಕೊಡ ಮಾಡುವ 2024 ನೇ ಸಾಲಿನ ಜೀವ ವೈವಿಧ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಮಾ.2 ರಂದು ಬೀದರ್ ನಲ್ಲಿ ರಾಜ್ಯ ಮಟ್ಟದ ಪಾರಂಪರಿಕ ವೈದ್ಯರ ಸಮ್ಮೇಳನ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು.

ಚಕ್ರವಾಕ ಸುಬ್ರಹ್ಮಣ್ಯ, ನೀರು, ಪ್ಲಾಸ್ಟಿಕ್, ಬಗ್ಗೆ ನಿರಂತರ ಜಾಗೃತಿ ಮೂಡಿಸುತ್ತಾ ಬಂದಿದ್ದಾರೆ. ಅಲ್ಲದೆ ಶಿವಮೊಗ್ಗ, ಉತ್ತರಕನ್ನಡ, ಚಿಕ್ಕಮಗಳೂರು, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳ ಪ್ರವಾಸ ಮಾಡಿ ಶಾಲಾ ಮಕ್ಕಳಿಗೆ ಪರಿಸರದ ಬಗ್ಗೆ ಅರಿವು ಮೂಡಿಸಲು ಶ್ರಮಿಸಿದ್ದರು.

Exit mobile version