
ಮಹಿಳಾ ಕಾಂಗ್ರೆಸ್ ಬಲಗೊಳಿಸುವುದು ನನ್ನ ಗುರಿ | ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷೆ ಶ್ವೇತಾ ಬಂಡಿ
ಶಿವಮೊಗ್ಗ: ಕಾಂಗ್ರೆಸ್ ಪಕ್ಷ ಮತ್ತು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯ ರೆಡ್ಡಿ ನನ್ನ ಮೇಲೆ ವಿಶ್ವಾಸವಿಟ್ಟು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ನೇತೃತ್ವ ನೀಡಿದ್ದಾರೆ. ಪಕ್ಷ ನನ್ನ ಮೇಲಿಟ್ಟ ವಿಶ್ವಾಸಕ್ಕೆ ಚ್ಯುತಿ ಬಾರದಂತೆ ಕಾರ್ಯ ನಿರ್ವಹಿಸುತ್ತೇನೆ ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿನೇಮಕಗೊಂಡ ಶ್ವೇತಾ ಬಂಡಿ ಹೇಳಿದ್ದಾರೆ.
ಈ ಹಿಂದೆ ಹೊಸನಗರ ತಾಲೂಕು ಕೆರೆಹಳ್ಳಿ ಜಿಪಂ ಸದಸ್ಯೆಯಾಗಿ ಕಾರ್ಯನಿರ್ವಹಿದ್ದೆ. ಆದರೆ ಪಕ್ಷದಲ್ಲಿ ಗುರುತರ ಜವಾಬ್ದಾರಿ ನಿರ್ವಹಿಸಿರಲಿಲ್ಲ. ಇದೀಗ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಮಹತ್ತರ ಜವಾಬ್ದಾರಿ ನೀಡಲಾಗಿದೆ ಎಂದರು.
ನನ್ನ ತಂದೆ ಬಿ.ಪಿ.ರಾಮಚಂದ್ರ ಹಿರಿಯ ಕಾಂಗ್ರೇಸಿಗರು. ನಮ್ಮ ಪಕ್ಚ ಕೂಡ ಅಧಿಕಾರದಲ್ಲಿದೆ. ಸಾಕಷ್ಟು ಹಿರಿಯರು ಸಪೋರ್ಟ್ ಮಾಡುತ್ತಿದ್ದಾರೆ. ಇದನ್ನೆಲ್ಲ ಬಳಸಿಕೊಂಡು ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಮಹಿಳಾ ಸಂಘಟನೆಯನ್ನು ಬಲಗೊಳಿಸುವ ವಿಶ್ವಾಸ ವ್ಯಕ್ಯಪಡಿಸಿದರು.
ಉಸ್ತುವಾರಿ ಸಚಿವರು, ಮಾಜಿ ಸಚಿವರು, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಮುಖರು, ಹಿರಿಯ ಮಹಿಳಾ ಸದಸ್ಯರು ಪಕ್ಷದ ಕಾರ್ಯಕರ್ತರ ಮಾರ್ಗದರ್ಶನದಲ್ಲಿ ಉತ್ತಮ ಕೆಲಸ ಮಾಡುವ ವಿಶ್ವಾಸ ವ್ಯಕ್ತಪಡಿಸಿದರು.
