ಡಿಸೆಂಬರ್ 10 ರಂದು ಕರ್ನಾಟಕ ಆರ್ಯ ಈಡಿಗ ಸಂಘದ ಅಮೃತ ಮಹೋತ್ಸವ ಹಾಗೂ ಜಾಗೃತ ಸಮಾವೇಶ: ರೇಣುಕಾನಂದ ಸ್ವಾಮೀಜಿ.

ಹೊಸನಗರ: ಬೆಂಗಳೂರಿನ ಅರಮನೆ ಮೈದಾನದಲ್ಲಿ ಡಿಸೆಂಬರ್ 10ರಂದು ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಅಮೃತ ಮಹೋತ್ಸವ ಹಾಗೂ ಬೃಹತ್ ಜಾಗೃತ ಸಮಾವೇಶವನ್ನು ಹಮ್ಮಿ ಕೊಳ್ಳಲಾಗಿದ್ದು ಇದರಲ್ಲಿ ಸಮಾಜದ ಬಾಂಧವರು, ಯುವ ಮುಖಂಡರುಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಮಾವೇಶವನ್ನ ಯಶಸ್ವಿಗೊಳಿಸಿಕೊಡುವಂತೆ ಶ್ರೀ ರೇಣುಕಾನಂದ ಸ್ವಾಮಿಗಳು ವಿನಂತಿಯನ್ನು ಮಾಡಿಕೊಂಡರು.
ಇಂದು ಈ ಕುರಿತಾಗಿ ಹೊಸನಗರ ತಾಲೂಕು ಆರ್ಯ ಈಡಿಗರ ಸಂಘದ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯನ್ನು ನಡೆಸಿ ಮಾತನಾಡಿದ ಅವರು ಸಮಾಜದ ಏಳಿಗೆಗಾಗಿ 75 ವರ್ಷಗಳಿಂದ ಶ್ರಮಿಸಿರುವಂತಹ ಎಲ್ಲಾ ಮಹನೀಯರನ್ನು ಸ್ಮರಿಸುವಂತಹ ಹಾಗೆಯೇ ಸಮಾಜದ 26 ಪಂಗಡಗಳು ಒಂದೇ ವೇದಿಕೆಯಲ್ಲಿ ಸೇರಿ ನಮ್ಮ ಒಗ್ಗಟ್ಟನ್ನು ಪ್ರದರ್ಶಿಸಿ ನಾವೆಲ್ಲರೂ ಒಟ್ಟಿಗೆ ಎಂಬ ಸ್ಪಷ್ಟ ಸಂದೇಶವನ್ನು ಸರ್ಕಾರಕ್ಕೆ ನೀಡುವಂತಹ ಕೆಲಸ ಈ ಸಮಾವೇಶದಲ್ಲಿ ನಡೆಯಲಿದೆ ಎಂದರು.
ಕರ್ನಾಟಕ ಪ್ರದೇಶ ಆರ್ಯ ಈಡಿಗ ಸಮಾಜ ಬಹಳಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದು ಅವುಗಳಿಗೆ ಪರಿಹಾರವನ್ನು ಕಂಡುಕೊಳ್ಳುವ ಪ್ರಯತ್ನ ಇದಾಗಿದೆ.  ಈ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿಗಳಿಗೆ ಈ ಭಾಗದ ಮುಳುಗಡೆ ಸಂತ್ರಸ್ತರಿಗೆ ಭೂಮಿಯ ಹಕ್ಕನ್ನ ನೀಡುವ ಮತ್ತು ಬಗರ್ ಹುಕುಂ ರೈತರಿಗೆ ಹಕ್ಕುಪತ್ರ ವಿತರಣೆ ಮಾಡುವಂತೆ ಒತ್ತಾಯಿಸುವುದು. ಈಡಿಗ ಅಭಿವೃದ್ಧಿ ನಿಗಮದ ಅಭಿವೃದ್ಧಿಗೆ ಅನುದಾನವನ್ನು ಬಿಡುಗಡೆ ಗೊಳಿಸುವುದು ಮತ್ತು ಇತಿಹಾಸ ಪ್ರಸಿದ್ಧ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಭೂ ಸಮಸ್ಯೆ, ಸರ್ಕಾರದ ಹಸ್ತಕ್ಷೇಪ ಕುರಿತಾಗಿ ನ್ಯಾಯವನ್ನು ಒದಗಿಸಿಕೊಡುವಂತೆ  ಮನವಿಯನ್ನು ನೀಡಲಾಗುವುದು ಎಂದರು.
ಈ ನಿಟಿನಲ್ಲಿ ಈ ಅಮೃತ ಮಹೋತ್ಸವ ಹಾಗೂ ಬೃಹತ್ ಜಾಗೃತ ಸಮಾವೇಶದಲ್ಲಿ ಪಕ್ಷಾತೀತವಾಗಿ ಸಮಾಜದ ಮುಖಂಡರುಗಳು ಬಾಂಧವರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮುಖ್ಯಮಂತ್ರಿಗಳ ಗಮನ ಸೆಳೆಯುವ ಮೂಲಕ ನಮ್ಮ ಮೂಲಭೂತ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹಾರ ಕಂಡುಕೊಳ್ಳುವಲ್ಲಿ ಸಹಕಾರಿಯಾಗಬೇಕು ಎಂದು ವಿನಂತಿಸಿ ಕೊಂಡರು.
ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಆರ್ಯ ಈಡಿಗ ಸಂಘದ ಅಧ್ಯಕ್ಷರಾದ ಬಿ.ಪಿ ರಾಮಚಂದ್ರ ನಿರ್ದೇಶಕರಾದ ಎರಗಿ ಉಮೇಶ್, ಶ್ರೀಧರ್,. ಲೇಖನ ಮೂರ್ತಿ. ಮುರುಳಿಧರ್, ಗೋಪಾಲ್, ಟೀಕಪ್ಪ ಮುಂತಾದವರು ಉಪಸ್ಥಿತರಿದ್ದರು.
Exit mobile version