![](https://goodmorningkarnataka.com/wp-content/uploads/2022/10/Sun-Time-electronics-hosanagara-ad.jpg)
ಹೊಸನಗರ: ಕರಿಮನೆ ಗ್ರಾಪಂ ನೂತನ ಉಪಾಧ್ಯಕ್ಷೆಯಾಗಿ ದೇವಮ್ಮ ಗೋಪಾಲ್ ಅವಿರೋಧ ಆಯ್ಕೆಯಾಗಿದ್ದಾರೆ.
ಶುಕ್ರವಾರ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಕೇವಲ ಒಂದೇ ನಾಮಪತ್ರ ಬಂದ ಹಿನ್ನೆಲೆಯಲ್ಲಿ ಆಯ್ಕೆ ಪ್ರಕ್ರಿಯೆ ಕಾರ್ಯನಿರ್ವಹಿಸಿದ ಲೋಕೋಪಯೋಗಿ ಇಲಾಖೆ ಎಂಜನಿಯರ್ ಮಲ್ಲಿಕಾರ್ಜುನ್ ಅವಿರೋಧ ಆಯ್ಕೆಯನ್ನು ಘೋಷಿಸಿದರು.
![](https://goodmorningkarnataka.com/wp-content/uploads/2022/11/IMG-20221121-WA0002.jpg)
![](https://goodmorningkarnataka.com/wp-content/uploads/2022/10/Sun-Time-electronics-hosanagara-ad-3.jpg)
ಹಿಂದೆ ಉಪಾಧ್ಯಕ್ಷರಾಗಿದ್ದ ಪ್ರಕಾಶ್ ಮಳಲಿ ಒಡಂಬಡಿಕೆಯಂತೆ ರಾಜೀನಾಮೆ ನೀಡಿದ ಹಿನ್ನೆಲೆ ಉಪಾಧ್ಯಕ್ಷ ಸ್ಥಾನ ತೆರವಾಗಿತ್ತು.
6 ಸದಸ್ಯಬಲದ ಕರಿಮನೆ ಗ್ರಾಪಂನಲ್ಲಿ ಕಾಂಗ್ರೆಸ್ ಬೆಂಬಲಿತ 5 ಬಿಜೆಪಿ ಬೆಂಬಲಿತ ಓರ್ವ ಸದಸ್ಯರಿದ್ದಾರೆ.
ಬಿಜೆಪಿ ಬೆಂಬಲಿತ ಸದಸ್ಯೆ ಅಶ್ವಿನಿ ರಾಜೇಶ್ ಗೈರಾಗಿದ್ದರು.
ಕೆಲ ದಿನಗಳ ಹಿಂದೆ ಹಿಂದಿನ ಅಧ್ಯಕ್ಷ ರಮೇಶ ಹಲಸಿನಹಳ್ಳಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆ ಚುನಾವಣಾ ಪ್ರಕ್ರಿಯೆ ನಡೆದು ನೂತನ ಅಧ್ಯಕ್ಷರಾಗಿ ದೇವೇಂದ್ರ ನಾಯ್ಕ ಆಯ್ಕೆಯಾಗಿದ್ದರು. ಇದೀಗ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಕೂಡ ಪೂರ್ಣಗೊಂಡಿದೆ.
ನೂತ ಉಪಾಧ್ಯಕ್ಷರಿಗೆ ಅಧ್ಯಕ್ಷ ದೇವೇಂದ್ರ ನಾಯ್ಕ, ಮಾಜಿ ಅಧ್ಯಕ್ಷ ರಮೇಶ ಹಲಸಿನಹಳ್ಳಿ ಮಾಜಿ ಉಪಾಧ್ಯಕ್ಷ ಪ್ರಕಾಶ ಮಳಲಿ, ಪ್ರಮುಖರಾದ ಸತೀಶ ಪಟೇಲ್, ಹರೀಶ್, ಪರ್ವತಪ್ಪ ಇತರರು ಸನ್ಮಾನಿಸಿ ಅಭಿನಂದಿಸಿದರು.
ನೂತನ ಉಪಾಧ್ಯಕ್ಷೆ ದೇವಮ್ಮ ಗೋಪಾಲ್ ಮಾತನಾಡಿ, ಸಾರ್ವಜನಿಕರು, ಕಾಂಗ್ರೆಸ್ ಪಕ್ಷದ ಹಿರಿಯರು, ವಿಶೇಷವಾಗಿ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಮತ್ತು ಕಾರ್ಯಕರ್ತರ ಸಹಕಾರದಿಂದ ಉತ್ತಮ ಅವಕಾಶ ಸಿಕ್ಕಿದೆ. ಉಪಾಧ್ಯಕ್ಷ ಸ್ಥಾನದಲ್ಲಿ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುತ್ತೇನೆ ಎಂದರು.
ಪ್ರಮುಖರಾದ ಪಾಂಡುಗೌಡ, ಗಿರೀಶ್, ಸಂದೇಶ್, ಕರಿಮನೆ ಗ್ರಾಮಸ್ಥರು ಹಾಜರಿದ್ದರು.
ಪಿಡಿಒ ವಿಶ್ವನಾಥ್ ಕಾರ್ಯಕ್ರಮ ನಿರ್ವಹಿಸಿದರು.
![](https://goodmorningkarnataka.com/wp-content/uploads/2022/10/Sun-Time-electronics-hosanagara-ad-4.jpg)