ಕ್ರೈಂತಾಲ್ಲೂಕುತೀರ್ಥಹಳ್ಳಿಪ್ರಮುಖ ಸುದ್ದಿಭದ್ರಾವತಿರಾಜ್ಯ

ಎರಡೆರಡು ಬಾರಿ ಹೆಜ್ಜೇನು ದಾಳಿ : ಏಳು ಜನರಿಗೆ ಜೇನು ಕಡಿತ : ಓರ್ವ ಗಂಭೀರ

ಹೊಸನಗರ: ಎರಡೆರಡು ಬಾರಿ ಹೆಜ್ಜೇನು ದಾಳಿಗೆ 6 ಜನ ಗಾಯಗೊಂಡು ಓರ್ವ ಗಂಭೀರಗೊಂಡ ಘಟನೆ ತಾಲೂಕಿನ ಚಿಕ್ಕಪೇಟೆ ನಗರದಲ್ಲಿ ನಡೆದಿದೆ.

ಶನಿವಾರ ಬೆಳಿಗ್ಗೆ ಚಿಕ್ಕಪೇಟೆ ಸೇತುವೆ ಬಳಿ ಇರುವ ಬಾಷಾ ಎಂಬುವವರ ಮನೆ ಸಮೀಪ ಹೆಜ್ಜೇನು ದಾಳಿ ಮಾಡಿದೆ. ಬಾಷಾ, ಅವರ ಪತ್ನಿ ಆಸ್ಮಾ, ಇಬ್ಬರು ಮಕ್ಕಳಾದ ಆರೀಫ್ ಮತ್ತು ಅನೀಫ್ ಮೇಲೆ ಹೆಜ್ಜೇನು ದಾಳಿ ಮಾಡಿದೆ. ಕೂಡಲೇ ನಗರ ಆಸ್ಪತ್ರೆಗೆ ಸಾಗಿಸಿ ನಾಲ್ವರಿಗೆ ಚಿಕಿತ್ಸೆ ಕೊಡಿಸಲಾಯಿತು.

ಮತ್ತೆ ದಾಳಿ:
ಸಂಜೆ 5 ಗಂಟೆ ವೇಳೆಗೆ ಅದೇ ಜಾಗದಲ್ಲಿ ಹೆಜ್ಜೇನು ದಾಳಿ ನಡೆಸಿದೆ. ಬೆಳಿಗ್ಗೆ ದಾಳಿಗೆ ಒಳಗಾಗಿದ್ದ ಬಾಷಾ ಅವರ ಪುತ್ರ ಆರೀಫ್ ಮೇಲೆ, ಪಕ್ಕದ ಮನೆ ಯಾಸಿನ್ ಮೇಲೆ ಮತ್ತೆ ಹೆಜ್ಜೇನು ದಾಳಿ ನಡೆಸಿದೆ. ಇದೇ ವೇಳೆ ಹಾಸಿಗೆ ರಿಪೇರಿಗೆ ಶಿವಮೊಗ್ಗದ ಮಂಜುನಾಥ ಬಡಾವಣೆ ನಿವಾಸಿ ಹುಸೇನ್ ಸಾಬ್ (68) ಮತ್ತು ಅವರ ಮಗ ಬಾಬಾ ಸಾಬ್ ಎಂಬುವವರ ಮೇಲೆ ಕೂಡ ಹೆಜ್ಜೇನು ದಾಳಿ ನಡೆಸಿದೆ. ವೃದ್ಧ ಹುಸೇನ್ ಸಾಬ್ ಮೇಲೆ ತೀವ್ರ ದಾಳಿಯಾಗಿದ್ದು ಅವರ ಸ್ಥಿತಿ ಗಂಭೀರವಾಗಿದೆ. ಕೂಡಲೇ ನಗರ ಆಸ್ಪತ್ರೆಗೆ ಸೇರಿಸಲಾಯಿತು. ಬಾರೀ ಪ್ರಮಾಣದಲ್ಲಿ ಜೇನು ಕಚ್ಚಿದ ಕಾರಣ ಸ್ಥಳೀಯರ ಸಹಕಾರದಿಂದ ಅವರ ದೇಹದಿಂದ 500 ಕ್ಕು ಹೆಚ್ಚು ಮುಳ್ಳು ಹೊರತೆಗೆಯಲಾಗಿದೆ. ಬಳಿಕ ಹೊಸನಗರ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾದಲ್ಲಿ ಇಡಲಾಗಿದೆ.

ಒಂದೇ ಜಾಗದಲ್ಲಿ ಎರಡು ಬಾರಿ ಹೆಜ್ಜೇನು ದಾಳಿ ನಡೆಸಿರುವುದು ಸ್ಥಳೀಯರಲ್ಲಿ ಆತಂಕ, ಭಯಕ್ಕು ಕಾರಣವಾಗಿದೆ.

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

1 of 45

Leave A Reply

Your email address will not be published. Required fields are marked *