HOSANAGARA CRIME | ಅಕ್ರಮ ಮರಳು‌ಸಾಗಣೆ | ಮೂರು ಟಿಪ್ಪರ್ ವಶ!

ಹೊಸನಗರ; ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ ಮೂರು ಟಿಪ್ಪರ್ ವಾಹನಗಳನ್ನು ವಶಕ್ಕೆ ಪಡೆದ ಘಟನೆ ಹೊಸನಗರ ವಲಯ ಅರಣ್ಯ ಇಲಾಖೆ ವ್ಯಾಪ್ತಿಯ ಮುತ್ತಲ ಗ್ರಾಮದಲ್ಲಿ ನಡೆದಿದೆ.

ಸಾರ್ವಜನಿಕ ಖಚಿತ ಮಾಹಿತಿ ಆಧರಿಸಿ ತಾಲೂಕಿನ ಮುತ್ತಲ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ದಾಳಿ ಮಾಡಿದ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಮತ್ತು ತಂಡ ಮೂರು ಟಿಪ್ಪರ್‌ಗಳನ್ನು ವಶಕ್ಕೆ ಪಡೆದು ಆರೋಪಿಗಳಾದ ಈಚಲಕೊಪ್ಪ ಕಿರಣ, ಮುತ್ತಲ ಮಂಜುನಾಥ ಮತ್ತು ರಾಮಚಂದ್ರ ವಿರುದ್ದ ಪ್ರಕರಣ ದಾಖಲಿಸಿದೆ.

ಉಪವಲಯ ಅರಣ್ಯಾಧಿಕಾರಿ ಯುವರಾಜ್, ರಾಘವೇಂದ್ರ, ಮಂಜುನಾಥ್, ವಾಹನ ಚಾಲಕರಾದ ಜಗದೀಶ್, ಪ್ರಮೋದ್‌ ದಾಳಿಯಲ್ಲಿ ಭಾಗವಹಿಸಿದ್ದರು.

Exit mobile version