ಶಿವಮೊಗ್ಗ ಜಿಲ್ಲೆಯಲ್ಲಿ ಶಿಕ್ಷಣಕ್ಕೆ ಒತ್ತು | ಅದಕ್ಕಾಗಿ ರಾಷ್ಟ್ರೀಯ ಯೋಜನೆಗಳನ್ನು ಹೊತ್ತು ತಂದಿದ್ದೇನೆ | ಸಂಸದ ಬಿ.ವೈ.ರಾಘವೇಂದ್ರ
ಹೊಸನಗರ:ಕೇಂದ್ರ ಸರ್ಕಾರದ ರಾಷ್ಟ್ರೀಯ ಗ್ರಾಮೀಣ ಸಾಕ್ಷರತಾ ಮಿಷನ್ ಯೋಜನೆಯಡಿ ಇಂದು ಸರ್ಕಾರಿ ಶಾಲೆಯಲ್ಲಿ ಶಿಕ್ಷಣಾಭ್ಯಾಸ ಮಾಡುತ್ತಿರುವ ಪ್ರಾಥಮಿಕ ಶಾಲೆಯ 1 ರಿಂದ 4 ನೆ ತರಗತಿ ಮಕ್ಕಳಿಗೆ ಸ್ವಟರ್ ಅನ್ನು ಸಂಸದರಾದ ಬಿ ವೈ ರಾಘವೇಂದ್ರ ವಿತರಿಸಿದರು.
ವಿತರಣೆ ಬಳಿಕ ಮಾತನಾಡಿದ ಅವರು ಶಿವಮೊಗ್ಗ ಜಿಲ್ಲೆಯಲ್ಲಿ ಅರವತ್ತು ಸಾವಿರ ವಿದ್ಯಾರ್ಥಿಗಳಿಗೆ ಸ್ವಟರ್ ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಒಂದು ಕಾಲದಲ್ಲಿ ಶೈಕ್ಷಣಿಕವಾಗಿ ಮೂಲಭೂತ ಸೌಕರ್ಯಗಳಿಲ್ಲದೆ ವಿದ್ಯಾರ್ಥಿಗಳು ಬಹಳಷ್ಟು ಸಮಸ್ಯೆಗಳನ್ನು ಅನುಭವಿಸುತ್ತಿದ್ದರು ಆದರೆ ಇದೀಗ ಸರ್ವ ಶಿಕ್ಷಣ ಅಭಿಯಾನದಲ್ಲಿ ಶೈಕ್ಷಣಿಕ ಕ್ಷೇತ್ರಕ್ಕೆ ಬೇಕಾದಂತಹ ಎಲ್ಲಾ ಸೌಕರ್ಯಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒದಗಿಸುತ್ತಿದ್ದು ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಇಂತಹ ವಿಶೇಷ ಕಾರ್ಯಕ್ರಮಗಳನ್ನು ಕೇಂದ್ರ ಸರ್ಕಾರ ಹಮ್ಮಿಕೊಂಡಿದೆ.
ಶಿಕ್ಷಣಕ್ಕೆ ಹೆಚ್ಚು ಒತ್ತಡ ನೀಡುವ ಉದ್ದೇಶದಿಂದ ಬಹಳಷ್ಟು ಯೋಜನೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಬಳಿಕ ಶೈಕ್ಷಣಿಕ ಕ್ಷೇತ್ರದಲ್ಲಿ ಬಹಳಷ್ಟು ಬದಲಾವಣೆ ಉಂಟಾಗಿದೆ ಹೆಣ್ಣು ಮಕ್ಕಳು ಶಾಲೆಯಿಂದ ಹೊರಗುಳಿದಿರುವ ಸಂಖ್ಯೆ ಶೇಕಡ 10 ರಿಂದ 2 ಕ್ಕೇ ಇಳಿದಿದೆ. ವಿದ್ಯಾಭ್ಯಾಸವನ್ನು ಮಧ್ಯಕ್ಕೆ ಬಿಟ್ಟು ಹೋಗುವರ ಸಂಖ್ಯೆ ಕೂಡ ಶೇಕಡ 9 ರಿಂದ 1.5 ಕ್ಕ್ ಇಳಿದಿದೆ ಹಾಗೆಯೇ ಹಿಂದೆ 42 ಮಕ್ಕಳಿಗೆ ಒಬ್ಬ ಶಿಕ್ಷಕರನ್ನು ನಿಯೋಜಿಸಲಾಗುತ್ತಿತ್ತು ಆದರೆ ಈಗ 24 ಮಕ್ಕಳಿಗೆ ಒಬ್ಬ ಶಿಕ್ಷಕರನ್ನ ನೇಮಿಸಲಾಗುತ್ತಿದೆ ಜೊತೆಗೆ ಮಹಿಳಾ ಶೌಚಾಲಯಗಳು ಹಿಂದೆ ಶೇಕಡ 30 ಇದ್ದದ್ದು ಇದೀಗ ಶೇಕಡ 90ಕ್ಕೂ ಅಧಿಕ ಮಹಿಳಾ ಶೌಚಾಲಯಗಳು ನಿರ್ಮಾಣವಾಗಿದೆ ಹೀಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶೈಕ್ಷಣಿಕ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನ ಜಾರಿಗೆ ತಂದಿದ್ದು, ಅದರ ಉಪಯೋಗವನ್ನು ಎಲ್ಲಾ ಭಾಗದ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂಬುದು ಸರ್ಕಾರದ ಆಶಯ ಎಂದರು.
ಹಾಗೆಯೇ ಈ ಭಾಗದ ನೆಟ್ವರ್ಕ್ ಸಮಸ್ಯೆ ಪ್ರವಾಸಿ ತಾಣಗಳ ಅಭಿವೃದ್ಧಿ ಕಾರ್ಯಗಳು ಇನ್ನು ಹೆಚ್ಚಿನ ಪ್ರಮಾಣದಲ್ಲಿ ಮಾಡಲಿದ್ದು ಕ್ಷೇತ್ರವನ್ನು ನಿರೀಕ್ಷೆಗೂ ಮೀರಿ ಅಭಿವೃದ್ಧಿ ಪಡಿಸಲಾಗುವುದು ಎಂದರು. ಈ ಕಾರ್ಯಕ್ರಮದಲ್ಲಿ ಶಾಸಕರಾದ ಆರಗ ಜ್ಞಾನೇಂದ್ರ, ಮಾಜಿ ಶಾಸಕ ಬಿ ಸ್ವಾಮಿ ರಾವ್, ಪಟ್ಟಣ ಪಂಚಾಯತ್ ಸದಸ್ಯ ಕೃಷ್ಣವೇಣಿ, ಹಾಲಗದ್ದೆ ಉಮೇಶ್, ರನ್.ಆರ್.ದೇವಾನಂದ್, ಹೆಚ್.ಆರ್ ತೀರ್ಥೇಶ್, ನಗರ ನಿತಿನ್, ಮೋಹನ್ ಮಂಡಾನಿ ಮುಂತಾದವರು ಉಪಸ್ಥಿತರಿದ್ದರು..