ಉಡುಪಿತೀರ್ಥಹಳ್ಳಿಶಿವಮೊಗ್ಗಶಿವಮೊಗ್ಗ ಜಿಲ್ಲೆಸಾಗರಹೊಸನಗರ

592 ಮೀ ತಲುಪಿದ ಮಾಣಿ ಜಲಾಶಯ : ವಾರಾಹಿ, ಹಾಲಾಡಿ ನದಿಪಾತ್ರದ ವಾಸಿಗಳಿಗೆ ಅಂತಿಮ ಮುನ್ನೆಚ್ಚರಿಕೆ

592 ಮೀ ತಲುಪಿದ ಮಾಣಿ ಜಲಾಶಯ : ವಾರಾಹಿ, ಹಾಲಾಡಿ ನದಿಪಾತ್ರದ ವಾಸಿಗಳಿಗೆ ಅಂತಿಮ ಮುನ್ನೆಚ್ಚರಿಕೆ

ಶಿವಮೊಗ್ಗ /ಉಡುಪಿ:  ಯಡೂರಿನ ಮಾಣಿ ಜಲಾಶಯದ ನೀರಿನ ಮಟ್ಟ ಏರುತ್ತಿದ್ದು ಯಾವುದೇ ಕ್ಷಣದಲ್ಲಿ ನೀರನ್ನು ಹೊರಬಿಡುವ ಸಾಧ್ಯತೆ ಇದ್ದು ಸುರಕ್ಷತೆ ದೃಷ್ಟಿಯಿಂದ ಅಂತಿಮ ಮುನ್ನೆಚ್ಚರಿಕೆ ನೀಡಲಾಗಿದೆ.

ಯಡೂರಿನ ಮಾಣಿಯಲ್ಲಿರುವ 594.36 ಮೀ ಗರೀಷ್ಠ ಮಟ್ಟದ ಜಲಾಶಯದಲ್ಲಿ ನೀರಿನ ಮಟ್ಟ ಗುರುವಾರ ಬೆಳಿಗ್ಗೆ ತನಕ 591.90 ಮೀ ತಲುಪಿದೆ. 2642 ಕ್ಯೂಸೆಕ್ಸ್ ಒಳಹರಿವು ಇದೆ. ಮಳೆ ಮುಂದುರೆದಿದ್ದು ನೀರಿನ ಹರಿವು ಕೂಡ ಇದೇ ರೀತಿ ಮುಂದುವರೆದಲ್ಲಿ ಮಾಣಿ ಜಲಾಶಯದಿಂದ ನೀರನ್ನು ಹೊರಬಿಡಲಾಗುವುದು ಎಂದು ನೊಟೀಸ್ ನಲ್ಲಿ ತಿಳಿಸಲಾಗಿದೆ.

ಅಣೆಕಟ್ಟಿನ ಕೆಳದಂಡೆಯಲ್ಲಿ, ವಾರಾಹಿ, ಹಾಲಾಡಿ ನದಿ ಪಾತ್ರದ ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಜಾನುವಾರು ವಗೈರೆ ಜೊತೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳುವಂತೆ ಕರ್ನಾಟಕ ವಿದ್ಯುತ್ ನಿಗಮದ ಮಾಸ್ತಿಕಟ್ಟೆ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು(ಕಾಮಗಾರಿ) ಸೂಚಿಸಿದ್ದಾರೆ.

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

ಬೆಂಗಳೂರು ಸಿನಿ ಉತ್ಸವದಲ್ಲಿ ಮಲೆನಾಡಿನ ಕಲರವ | ಗಾರ್ಗಿ ಕಾರೇಹಕ್ಲು ನಿರ್ದೇಶನದ ಹಕ್ಕಿಗಾಗಿ ಸಿನಿಮಾಕ್ಕೆ ಜೂರಿ ಅವಾರ್ಡ್|

ಬೆಂಗಳೂರು ಸಿನಿ ಉತ್ಸವದಲ್ಲಿ ಮಲೆನಾಡಿನ ಕಲರವ | ಗಾರ್ಗಿ ಕಾರೇಹಕ್ಲು ನಿರ್ದೇಶನದ ಹಕ್ಕಿಗಾಗಿ…

1 of 51

Leave A Reply

Your email address will not be published. Required fields are marked *