ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು | ನಿಟ್ಟೂರು ಗ್ರಾಪಂ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು | ನಿಟ್ಟೂರು ಗ್ರಾಪಂ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ಹೊಸನಗರ: ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡಲಾಗಿದೆ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.

ತಾಲೂಕು ನಿಟ್ಟೂರು ಗ್ರಾಪಂ ವ್ಯಾಪ್ತಿಯಲ್ಲಿ ಭಾನುವಾರ ವಿವಿಧ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ ಅವರು, ರಾಜ್ಯ ಸರ್ಕಾರ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳ ಪರಿಣಾಮಕಾರಿ ಅನುಷ್ಠಾನ ಮಾಡುತ್ತಿದೆ ಎಂದರು.


ಈ ವೇಳೆ ರೈತರು ಭೀಕರವಾಗಿ ಹರಡುತ್ತಿರುವ ಎಲೆಚುಕ್ಕೆ ರೋಗದ ಬಗ್ಗೆ ಗಮನ ಸೆಳೆದು ಸರ್ಕಾರ ಮಟ್ಟದಲ್ಲಿ ಪರಿಹಾರಕ್ಕೆ ಮಾತುಕತೆ ನಡೆಸುವಂತೆ ಮನವಿ ಮಾಡಿದರು.
ಕೆ.ಬಿ.ಸರ್ಕಲ್, ಬೇಳೂರು, ಸಿಡ್ಲುಕುಣಿ, ಹೆಬ್ಬಿಗೆ, ಗುರುಟೆ ಗ್ರಾಮದ ಜಲಜೀವನ್ ಮಿಷನ್ ಕಾಮಗಾರಿಗೆ ಚಾಲನೆ ನೀಎಲಾಯಿತು.

ರೈತರ ಮನವಿಗೆ ಸ್ಪಂದಿಸಿದ ಶಾಸಕ ಬೇಳೂರು ನಾಗೋಡಿಯಲ್ಲಿ ಎಲೆಚುಕ್ಕೆರೋಗಕ್ಕೆ ತುತ್ತಾದ ತೋಟದ ಪ್ರದೇಶಕ್ಕೆ ತೆರಳಿ ವೀಕ್ಷಿಸಿದರು. ಅಲ್ಲದೇ ಸ್ಥಳೀಯರಿಂದ ಮಾಹಿತಿ ಪಡೆದುಕೊಂಡರು. ಈ ವಿಚಾರವಾಗಿ ಸರ್ಕಾರದ ಗಮನ ಸೆಳೆಯುವುದಾಗಿ ಭರವಸೆ ನೀಡಿದರು.

ನಿಟ್ಟೂರು ಗ್ರಾಪಂ ಅಧ್ಯಕ್ಷೆ ಚಂದ್ರಾವತಿ, ಉಪಾಧ್ಯಕ್ಷೆ ವಿನೋದ, ಗ್ರಾಪಂ ಸದಸ್ಯರಾದ ವಿಶ್ವನಾಥ ನಾಗೋಡಿ, ಚಂದಯ್ಯ ಜೈನ್, ಶೋಭಾ, ಶಾಸಕರ ಆಪ್ತ ಸಹಾಯಕ ಸಣ್ಣಕ್ಕಿ ಮಂಜು, ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಮಾಸ್ತಿಕಟ್ಟೆ ಸುಬ್ರಹ್ಮಣ್ಯ, ನಿಟ್ಟೂರು ಕಾಂಗ್ರೆಸ್ ಘಟಕದ ಅಧ್ಯಕ್ಷ ನಾಗೇಂದ್ರ ಜೋಗಿ, ಎ.ಒ.ರಾಮಚಂದ್ರ, ರವೀಶ ಹೆಗಡೆ, ಜೆ.ವಿ.ಸುಬ್ರಹ್ಮಣ್ಯ ಸುರೇಶ ಕೂಡ್ಲುಕೊಪ್ಪ, ಓಂಕಾರ ಕೆ.ಬಿ.ಸರ್ಕಲ್, ಮಂಜುನಾಥ ಶೆಟ್ಟಿ, ಮಂಜಪ್ಪ ಬೆನ್ನಟ್ಟೆ, ಬಿ.ಹೆಚ್.ಸುರೇಶ್, ಉದಯ ಪೂಜಾರಿ, ಹರ್ಷ ಹೆಬ್ಬಿಗೆ, ಕೊಲ್ಲನಾಯ್ಕ ಗುರಟೆ, ಸ್ಥಳೀಯರು ಇದ್ದರು.

Exit mobile version