![](https://goodmorningkarnataka.com/wp-content/uploads/2022/10/Sun-Time-electronics-hosanagara-ad.jpg)
ಬೆಂಗಳೂರು: ಕಂದಾಯ ನಿರೀಕ್ಷಕರು (RI) ಗ್ರಾಮ ಲೆಕ್ಕಿಗರು (VA) ತಾವು ಕೆಲಸ ಮಾಡುವ ಕಂದಾಯ ವೃತ್ತದಲ್ಲೇ ವಾಸವಿರುವುದನ್ನು ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ.
ಈ ಹಿಂದೆ ಕೇಂದ್ರ ಸ್ಥಾನದಲ್ಲೇ ವಾಸವಿದ್ದು ಕಾರ್ಯನಿರ್ವಹಿಸುವಂತೆ ಸುತ್ತೋಲೆ ಹೊರಡಿಸಿದ್ದರು ಕೂಡ ರಾಜಸ್ವ ನಿರೀಕ್ಷಕರು, ಗ್ರಾಮಲೆಕ್ಕಿಗರು ಕೇಂದ್ರ ಸ್ಥಾನದಲ್ಲಿ ವಾಸವಿರದೇ, ಸಾರ್ವಜನಿಕರಿಗೆ ಕಚೇರಿ ವೇಳೆಯಲ್ಲಿ ಲಭ್ಯವಾಗುತ್ತಿಲ್ಲ.
ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಈ ಸೂಚನೆಯನ್ನು ಎಲ್ಲಾ ರಾಜಸ್ವ ನಿರೀಕ್ಷರು ಮತ್ತು ಗ್ರಾಮಲೆಕ್ಕಿಗರು ಕಟ್ಟುನಿಟ್ಟಾಗಿ ಪಾಲಿಸಬೇಕು. ತಾಲೂಕು ತಹಶೀಲ್ದಾರ್ ಗಳು ಪರಿಶೀಲಿಸಿ, ದೂರುಗಳು, ಲೋಪದೋಷಗಳು ಕಂಡುಬಂದಲ್ಲಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ವರದಿ ನೀಡಿ ಶಿಸ್ತುಕ್ರಮಕ್ಕೆ ಶಿಫಾರಸ್ಸು ಮಾಡತಕ್ಕದ್ದು ಎಂದು ಆದೇಶಿಸಲಾಗಿದೆ.
![](https://goodmorningkarnataka.com/wp-content/uploads/2022/11/IMG-20221121-WA0002.jpg)
![](https://goodmorningkarnataka.com/wp-content/uploads/2022/10/Sun-Time-electronics-hosanagara-ad-3.jpg)
ರಾಜಸ್ವ ನಿರೀಕ್ಷಕರು ಮತ್ತು ಗ್ರಾಮಲೆಕ್ಕಿಗರ ಕುರಿತ ಬಂದ ದೂರನ್ನು ಜಿಲ್ಲಾಧಿಕಾರಿಗಳು ಗಂಭೀರವಾಗಿ ಪರಿಶೀಲಿಸಿ, ಕೇಂದ್ರ ಸ್ಥಾನದಲ್ಲಿ ವಾಸವಿರದೇ ಸಾರ್ವಜನಿಕರಿಗೆ ಕಚೇರಿ ವೇಳೆ ತೊಂದರೆ ಕಂಡು ಬಂದಲ್ಲಿ ಅಂತಹ ರಾಜಸ್ವ ನಿರೀಕ್ಷಕರು, ಗ್ರಾಮಲೆಕ್ಕಿಗರ ವಿರುದ್ಧ ಕೂಡಲೇ ಶಿಸ್ತುಕ್ರಮ ಕೈಗೊಳ್ಳುವಂತೆ ಆದೇಶಿಸಲಾಗಿದೆ.
![](https://goodmorningkarnataka.com/wp-content/uploads/2022/10/Sun-Time-electronics-hosanagara-ad-4.jpg)