ಆನಂದಪುರ ಬಳಿ ಅಪಘಾ*ತ 30ಕ್ಕೂ ಹೆಚ್ಚು ಪ್ರಯಾಣಿಕರು, ವಿದ್ಯಾರ್ಥಿಗಳಿಗೆ ಗಾಯ

ಆನಂದಪುರ ಬಳಿ ಅಪಘಾ*ತ 30ಕ್ಕೂ ಹೆಚ್ಚು ಪ್ರಯಾಣಿಕರು, ವಿದ್ಯಾರ್ಥಿಗಳಿಗೆ ಗಾಯ

ಆನಂದಪುರ(SAGAR)  ಹೆದ್ದಾರಿ ಸಾಗರ ರಸ್ತೆಯ ಮುಂಬಾಳ್ ತಿರುವಿನಲ್ಲಿ  KSRTC ಬಸ್  ಹಾಗೂ ಗೂಡ್ಸ್ ಕಂಟೇನರ್ ನಡುವೆ ಅಪಘಾತವಾಗಿ ಡಿಕ್ಕಿಯಾಗಿ 30ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು  ಬಸ್ ಚಾಲಕ ಸೇರಿದಂತೆ ನಾಲ್ವರು ಗಂಭೀರ ಗಾಯಗೊಂಡ  ಘಟನೆ ಗುರುವಾರ ಬೆಳಗ್ಗೆ ನಡೆದಿದೆ.

 ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ  KSRTC ಬಸ್ಸು, ಆನಂದಪುರ ಕಡೆಯಿಂದ  ಸಾಗರಕ್ಕೆ ತೆರಳುತ್ತಿದ್ದ ಗೂಡ್ಸ್ ಕಂಟೈನರ್ ನಡುವೆ ಡಿಕ್ಕಿಯಾಗಿದೆ. ಬಸ್ ಚಾಲಕ ಸೇರಿದಂತೆ ನಾಲ್ವರಿಗೆ ತೀವ್ರವಾದ   ಗಾಯಗೊಂಡ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ  ಶಿವಮೊಗ್ಗ ಆಸ್ಪತ್ರೆಗೆ  ರವಾನಿಸಲಾಗಿದೆ.. ಬಸ್ಸಿನಲ್ಲಿದ್ದ ಬಹುತೇಕ ಪ್ರಯಾಣಿಕರು ಗಾಯಗೊಂಡಿದ್ದಾರೆ.
KSRTC ಬಸ್ಸಲ್ಲಿ  ಸಾಗರದಿಂದ ಶಿವಮೊಗ್ಗ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿದ್ದು ಗಾಯಗೊಂಡಿದ್ದಾರೆ.

ಗಾಯಗೊಂಡವರನ್ನು ಆನಂದಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕಳಿಸಲಾಗಿದೆ. ಈ ವೇಳೆ ಒಂದು ಗಂಟೆಗೂ ಹೆಚ್ಚು ಟ್ರಾಫಿಕ್ ಜಾಮ್ ಆಗಿತ್ತು.  ಆನಂದಪುರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Exit mobile version