ಕ್ರೈಂಪ್ರಮುಖ ಸುದ್ದಿಶಿಕಾರಿಪುರ

ಧಾರುಣ ಘಟನೆ| ನೀರಿನ ತೊಟ್ಟಿಗೆ ಬಿದ್ದು 11 ತಿಂಗಳ ಮಗು ಸಾವು | ಶಿಕಾರಿಪುರ ತಾಲೂಕಿನಲ್ಲಿ ಘಟನೆ

ಶಿಕಾರಿಪುರ:  ತಾಲ್ಲೂಕಿನ ಚಿಕ್ಕಜೋಗಿಹಳ್ಳಿ ಗ್ರಾಮದ ಛಾಯಾಗ್ರಾಹಕರಾದ ದೇವರಾಜ್ ಹಾಗೂ ಅನುಷಾ ದಂಪತಿಯ ಮುದ್ದಿನ ಮಗನಾದ ಅಕ್ಷಯ್ (11 ತಿಂಗಳು ) ಮನೆಯ ಮುಂದಿನ ತೊಟ್ಟಿಯಲ್ಲಿ ಬಿದ್ದು ಸಾವನ್ನಪ್ಪಿದ್ದಾನೆ.

ಮುಂದಿನ ವಾರ ಒಂದನೇ ವರ್ಷಕ್ಕೆ ಕಾಲಿಡುತ್ತಿದ್ದು ಮಗುವಿನ ಜನ್ಮ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲು ಯೋಚಿಸಿದ್ದ ಮನೆಯಲ್ಲಿಗ ಸಂಭ್ರಮದ ಬದಲಾಗಿ ಸ್ಮಶಾನ ಮೌನ ಆವರಿಸಿದೆ.

ಮಹಾಲಯ ಅಮವಾಸೆ ಯಾದ ಭಾನುವಾರ ಕುಟುಂಬಸ್ಥರು ವಾಹನ ತೊಳೆಯಲು ಪೂಜೆ ಪುನಸ್ಕಾರದ ಕಡೆ ಗಮನ ಕೊಟ್ಟ ಸಂದರ್ಭ, ಅಂಬೆಗಾಲು ಇಡುತ್ತಿದ್ದ ಮಗು ಅರಿವಿಲ್ಲದಂತೆ ತೊಟ್ಟಿಗೆ ಬಿದ್ದು ಸಾವನ್ನಪ್ಪಿದೆ. ಸ್ವಲ್ಪ ಹೊತ್ತಿನ ನಂತರ ಮಗುವಿನ ತಾತ ವಾಹನ ತೊಳೆಯಲು ತೊಟ್ಟಿಯಲ್ಲಿ ಬಗ್ಗಿದಾಗ ಮಗುವನ್ನು ಕಂಡು ದಿಗ್ಭ್ರಾಂತರಾಗಿದ್ದಾರೆ.

ತಕ್ಷಣ ಶಿಕಾರಿಪುರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿದರೂ ಪ್ರಯೋಜನವಾಗಲಿಲ್ಲ. ಪೋಸ್ಟ್ ಮಾರ್ಟಮ್ ಮಾಡಿದ ವೈದ್ಯಾಧಿಕಾರಿಗಳ ತಂಡ ಮಗುವಿನ ಕಳೆಬರಹವನ್ನು ಪೋಷಕರಿಗೆ ನೀಡುವಾಗ ಅಲ್ಲಿ ಸೇರಿದ್ದ ಜನಸ್ತೋಮ ಹಾಗೂ ಕುಟುಂಬಸ್ಥರ ಆಕ್ರಂದನ ನೆರೆದಿದ್ದ ಜನರ ಹೃದಯ ಹಿಂಡುತ್ತಿತ್ತು.

ಮೃತನ ಮೂರು ವರ್ಷದ ಅಕ್ಕ ನಕ್ಷತ್ರ ಹಾಗೂ ತಂದೆ ತಾಯಿಯ ಪಾಡು ಹೇಳತಿರದು. ಭಾನುವಾರ ಸಂಜೆಯೇ ಗ್ರಾಮದ ಹಿಂದೂ ರುದ್ರಭೂಮಿಯಲ್ಲಿ ಭಗವಂತನಿಗೆ ಹಿಡಿಶಾಪ ಹಾಕುತ್ತಿದ್ದ ಊರಿನ ಗ್ರಾಮಸ್ಥರ ನಡುವೆಯೇ ಆ ಪುಟ್ಟ ಮಗುವಿನ ಶವ ಸಂಸ್ಕಾರ ನಡೆಯಿತು. ಇಡೀ ಊರಿಗೆ ಊರೇ ಶವಸಂಸ್ಕಾರದಲ್ಲಿ ಭಾಗಿಯಾಗಿದ್ದು ಚಿಕ್ಕಜೋಗಿಹಳ್ಳಿ ಗ್ರಾಮದಲ್ಲಿ ಸಂಪೂರ್ಣ ಮೌನ ಆವರಿಸಿದೆ.

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

1 of 45

Leave A Reply

Your email address will not be published. Required fields are marked *