
ವಿಕಲಚೇತನರ ಕಲ್ಯಾಣ ಕ್ಷೇತ್ರದಲ್ಲಿ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಶಿವಮೊಗ್ಗ; ಅಕ್ಟೋಬರ್ 18: ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ 2023-24ನೇ ಸಾಲಿಗೆ ರಾಜ್ಯ ಸರ್ಕಾರವು ವಿಕಲಚೇತನರ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಿಸಿದ/ನಿರ್ವಹಿಸುತ್ತಿರು ವ್ಯಕ್ತಿ, ಸಂಸ್ಥೆ ಹಾಗೂ ವಿಶೇಷ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿಯನ್ನು ಇಲಾಖೆ ವೆಬ್‍ಸೈಟ್ www.dwdsc.kar.nic.in ರಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅ. 25 ರೊಳಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಬಿಎಸ್‍ಎನ್‍ಎಲ್ ಕಚೇರಿ ಹತ್ತಿರ, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ಸಲ್ಲಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗೆ ಕಚೇರಿಯನ್ನು ಖುದ್ದಾಗಿ ಅಥವಾ ವೆಬ್‍ಸೈಟ್ ಅಥವಾ ದೂ.ಸಂ.: 08182-295234/251676 ಗಳನ್ನು ಸಂಪರ್ಕಿಸುವುದು.
ಗಾಜನೂರು ಜವಾಹರ ನವೋದಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
ಶಿವಮೊಗ್ಗ : ಅಕ್ಟೋಬರ್ 18: ಶಿವಮೊಗ್ಗ ಸಮೀಪದ ಗಾಜನೂರಿನ ಜವಾಹರ ನವೋದಯ ವಿದ್ಯಾಲಯದಲ್ಲಿ 2024-25ನೇ ಸಾಲಿನಲ್ಲಿ 9 ಮತ್ತು 11ನೇ ತರಗತಿಗಳಲ್ಲಿ ಖಾಲಿ ಇರುವ ಸೀಟುಗಳನ್ನು ಪ್ರವೇಶ ಪರೀಕ್ಷೆಗಳ ಮೂಲಕ ಭರ್ತಿ ಮಾಡಲು ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


2023-24ನೇ ಸಾಲಿನಲ್ಲಿ ಸರ್ಕಾರಿ ಅಥವಾ ಸರ್ಕಾರೇತರ ಶಾಲೆಗಳಲ್ಲಿ 8ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು 9ನೇ ತರಗತಿಯ ಪ್ರವೇಶಕ್ಕೆ ಜಾಲತಾಣ https://cbseitms.nic.in/2023/nvsix ಮತ್ತು 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಪ್ರಥಮ ಪಿಯುಸಿ. ಪ್ರವೇಶಕ್ಕೆ ಜಾಲತಾಣ https://cbseitems.nic.in/2023/nvsix_11 ಮೂಲಕ. ಅಕ್ಟೋಬರ್ 30ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆಸಕ್ತ ವಿದ್ಯಾರ್ಥಿಗಳು ಈ ಸದವಕಾಶ ಲಾಭ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
