ಇತಿಹಾಸ ಪ್ರಸಿದ್ಧ ಶ್ರೀ ಪಂಚಮುಖಿ ಆಂಜನೇಯ ದೇವಸ್ಥಾನ ಸಮಿತಿಯ ನೂತನ ಅಧ್ಯಕ್ಷರಾಗಿ ನಾಡಗಂಟಿ ಚಂದ್ರಶೇಖರ್

ಹೊಸನಗರ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಪಂಚಮುಖಿ ಆಂಜನೇಯ ದೇವಸ್ಥಾನ ಸಮಿತಿ ನೂತನ ಅಧ್ಯಕ್ಷರಾಗಿ ನಾಡಗಂಟಿ ಚಂದ್ರಶೇಖರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಹಿಂದೆ ಸಮಿತಿಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿ ದೇವಸ್ಥಾನದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸಿದ್ದ ನಾಡಗಂಟಿ ಚಂದ್ರಶೇಖರ್ ನೂತನವಾಗಿ ಅಧ್ಯಕ್ಷ ಸ್ಥಾನದ ಪ್ರಮುಖ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.
ಸಮಿತಿಯ ಗೌರವಾಧ್ಯಕ್ಷರಾಗಿ ಬಹಳ ಹಿಂದಿನಿಂದಲೂ ದೇಗುಲದ ಸೇವೆ ಮತ್ತು ಅಭಿವೃದ್ಧಿಯಲ್ಲಿ ಒತ್ತು ನೀಡಿದ್ದ ಕೃಷ್ಣಮೂರ್ತಿ ಬಾಯಾರ್ ಆಯ್ಕೆಯಾಗಿದ್ದಾರೆ.
ಉಳಿದಂತೆ ಉಪಾಧ್ಯಕ್ಷರಾಗಿ ಮಂಜುನಾಥ ಶೆಟ್ಟಿ, ಕೋಶಾಧಿಕಾರಿಯಾಗಿ ದಿವಾಕರ ಮಂಜರು, ಪ್ರ.ಕಾರ್ಯದರ್ಶಿಯಾಗಿ ರಮೇಶ್, ಕಾರ್ಯದರ್ಶಿಯಾಗಿ ಶ್ರೀಕಾಂತ ಪಂಡಿತ್ ಆಯ್ಕೆಯಾಗಿದ್ದಾರೆ.

ಕ್ರಿಯಾಶೀಲ ವ್ಯಕ್ತಿಗಳ ಸಂಗಮದೊಂದಿಗೆ ಉತ್ತಮ ಸಮಿತಿ ರಚನೆಯಾಗಿದ್ದು ದೇಗುಲದ ಸರ್ವಾಂಗೀಣ ಅಭಿವೃದ್ಧಿಗೆ ಆಧ್ಯತೆ ನೀಡಲಾಗುವುದು ಎಂದು ನೂತನ ಅಧ್ಯಕ್ಷ ನಾಡಗಂಟಿ ಚಂದ್ರಶೇಖರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Exit mobile version