| ರಾಜ್ಯ ಬಿಜೆಪಿಯ ನೂತನ ಸಾರಥಿಯಾಗಿ ಬಿ.ವೈ.ವಿಜೇಂದ್ರ | ಶಿಕಾರಿಪುರ ಶಾಸಕನಿಗೆ ಒಲಿದ ರಾಜ್ಯಾಧ್ಯಕ್ಷ ಸ್ಥಾನ | ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆದೇಶ

ಬೆಂಗಳೂರು| ಹಲವು ತಿಂಗಳಿಂದ ನೆನಗುದಿಗೆ ಬಿದ್ದಿದ್ದ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಕೊನೆಗೂ ನೂತನ ಸಾರಥಿ ನೇಮಕ ಮಾಡಲಾಗಿದೆ.

ಮಾಜಿ‌ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ, ಶಿಕಾರಿಪುರ ಶಾಸಕ ಬಿ.ವೈ.ವಿಜೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೇಮಕ‌ ಮಾಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆದೇಶ ಹೊರಡಿಸಿದ್ದಾರೆ.

ಲೋಕಸಭಾ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಅಳೆದು ತೂಗಿ ಕೊನೆಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರನಿಗೆ ಅವಕಾಶ ನೀಡುವ ಮೂಲಕ ರಾಜ್ಯದ ಪ್ರಭಾವಿ ಲಿಂಗಾಯತ ಸಮಾಜಕ್ಕೆ‌ ಮಣೆ ಹಾಕಲಾಗಿದೆ.

Exit mobile version