
ಹೊಸನಗರ.ಆಗಸ್ಟ್.02: ಉಜ್ಜಿವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಹಾಗೂ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಜಯನಗರ ಇವರ ಸಹಯೋಗದಲ್ಲಿ ವಿದ್ಯಾರ್ಥಿಗಳಲ್ಲಿ ಸ್ವಚ್ಛತಾ ಅರಿವು ಎಂಬ ಕಾರ್ಯಕ್ರಮವನ್ನು ಆಯೋಜಿಸಿ ಸ್ವಚ್ಛತೆ ಕುರಿತಾಗಿ ವಿದ್ಯಾರ್ಥಿಗಳಲ್ಲಿ ಅರಿವನ್ನ ಮೂಡಿಸಲಾಯಿತು.
ತಾಲೂಕಿನ ವಿಜಯನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದು ಈ ಸಂದರ್ಭದಲ್ಲಿ ಮಾತನಾಡಿದ ಉಜ್ಜಿವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ನ ವ್ಯವಸ್ಥಾಪಕರಾದ ನಾಗರಾಜ್ ಶೆಟ್ಟಿ, ನಮ್ಮ ಸಂಸ್ಥೆಯ ಎಲ್ಲಾ ಶಾಖೆಗಳಲ್ಲಿಯೂ ಈ ಕಾರ್ಯಕ್ರಮವನ್ನು ಆ ಯೋಜನೆ ಮಾಡಲಾಗಿದ್ದು ಅದರಂತೆ ಇಲ್ಲಿಯೂ ಸಹ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಈ ಮೂಲಕವಾಗಿ ವಿದ್ಯಾರ್ಥಿಗಳಲ್ಲಿ ತಮ್ಮ ಸುತ್ತಮುತ್ತಲಿನ ಪರಿಸರವನ್ನ ಹೇಗೆ ಸ್ವಚ್ಛವಾಗಿರಬೇಕು ಎಂಬುದರ ಕುರಿತಾಗಿ ಅರಿವು ಮೂಡಬೇಕು ಎಂದರು.


ಈ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಆಯೋಜನೆ ಗೊಳ್ಳಬೇಕಿದೆ ಅಲ್ಲದೆ ವಿದ್ಯಾರ್ಥಿಗಳಲ್ಲಿ ಶಿಕ್ಷಕರು ಮತ್ತು ಪೋಷಕರುಗಳು ಈ ಕುರಿತಾಗಿ ಅರಿವಲ್ಲ ಮೂಡಿಸಬೇಕು ಅಲ್ಲದೆ ನಮ್ಮ ಶಾಖೆಯ ವತಿಯಿಂದ ಈ ಶಾಲೆಗೆ ಬಣ್ಣವನ್ನು ಸಹ ಹಚ್ಚುವ ಕೆಲಸವನ್ನು ಮಾಡಲಾಗಿದೆ ಹಾಗೂ ಇಲ್ಲಿನ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಿದೆ ಎಂದು ತಿಳಿಸಿದರು
ಈ ಸಂದರ್ಭದಲ್ಲಿ. ಶಿಕ್ಷಕರಾದ ಗುರುರಾಜ್. ಶಾಖಾ ಸಿಬ್ಬಂದಿಗಳಾದ ಮಂಜುನಾಥ್ ಶ್ರೀಧರ್ ಪವನ್ ಮುಂತಾದವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು..
