
-
ಜಿಪಂ ತಾಪಂ ಚುನಾವಣೆ ನಡೆಸಲು 4 ವಾರಗಳಲ್ಲಿ ಮರುವಿಂಗಡಣೆ, ಸ್ಥಾನಗಳ ಮೀಸಲಾತಿ ಅಂತಿಮಗೊಳಿಸಲು ಹೈಕೋರ್ಟ್ ಸೂಚನೆ
ಬೆಂಗಳೂರು: ರಾಜ್ಯದಲ್ಲಿ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ನಡೆಸಲು ಅನುಕೂಲವಾಗುವಂತೆ ನಾಲ್ಕು ವಾರಗಳಲ್ಲಿ ಕ್ಷೇತ್ರಗಳ ಮರುವಿಂಗಡಣೆ ಮತ್ತು ಮೀಸಲಾತಿಯನ್ನು ಅಂತಿಮಗೊಳಿಸುವಂತೆ ಕರ್ನಾಟಕ ಹೈಕೋರ್ಟ್ ಗುರುವಾರ ಸರ್ಕಾರಕ್ಕೆ ಸೂಚಿಸಿದೆ.
ತಾ.ಪಂ ಮತ್ತು ಜಿಪಂ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.


ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ ಅವರು ಈ ಕಾರ್ಯಕ್ಕೆ ಸರ್ಕಾರಕ್ಕೆ ಹೆಚ್ಚಿನ ಸಮಯ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು.
ಅದಕ್ಕೆ ಸಾಂವಿಧಾನಿಕ ಮಾರ್ಗಸೂಚಿಯಂತೆ ಚುನಾವಣೆ ನಡೆಸಬೇಕಾಗುತ್ತದೆ ಎಂದು ಪೀಠ ಉತ್ತರಿಸಿತು. ಈಗಾಗಲೇ 10 ವಾರಗಳ ಕಾಲಾವಕಾಶ ನೀಡಲಾಗಿದ್ದು, ಮರುವಿಂಗಡಣೆ ಮತ್ತು ಮೀಸಲಾತಿಯ ಕಾರ್ಯಗಳನ್ನು ನಾಲ್ಕು ವಾರಗಳಲ್ಲಿ ಪೂರ್ಣಗೊಳಿಸಬೇಕು ಎಂದು ಪೀಠ ಹೇಳಿದೆ.
